ಬ್ಯಾಂಕ್ ಆಫ್ ಬರೋಡಾ(BOB Recruitment 2024) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸಿಹಿ ಸುದ್ದಿ, ಬ್ಯಾಂಕ್ ಆಫ್ ಬರೋಡಾ(Bank of Baroda) ದಲ್ಲಿ ಖಾಲಿ ಇರುವ ಮ್ಯಾನೇಜರ್ (ಸೆಕ್ಯುರಿಟಿ ಆಫೀಸರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾ, ಅಧಿಕೃತ ಅಧಿಸೂಚನೆ ಕುರಿತು ಸಂಪೂರ್ಣ ಓದಿ ಅಪ್ಲೈ ಮಾಡಿ.
BOB Recruitment 2024 ಅಧಿಸೂಚನೆ ಸಂಕ್ಷಿಪ್ತ ಪರಿಚಯ:
ನೇಮಕಾತಿ ಪ್ರಾಧಿಕಾರ: ಬ್ಯಾಂಕ್ ಆಫ್ ಬರೋಡಾ (BOB)
ಹುದ್ದೆ ಹೆಸರು: ಮ್ಯಾನೇಜರ್ (ಸೆಕ್ಯುರಿಟಿ ಆಫೀಸರ್)
ಹುದ್ದೆಗಳ ಸಂಖ್ಯೆ: 38
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: 48170 – 69810 ರೂ.
ಅಧಿಕೃತ ವೆಬ್‌ಸೈಟ್:
ವಿದ್ಯಾರ್ಹತೆ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪಡೆದಿರಬೇಕು.
ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2024ಕ್ಕೆ ಕನಿಷ್ಠ 25 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
ವೇತನ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 48,170-69,810 ರೂ. ವೇತನ ಪಡೆಯುತ್ತಾರೆ.
ಅರ್ಜಿ ಶುಲ್ಕ:
SC/ST/ಮಹಿಳಾ ಅಭ್ಯರ್ಥಿಗಳಿಗೆ: 100 ರೂ.
ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 600 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ಸೈಕೋಮೆಟ್ರಿಕ್ ಪರೀಕ್ಷೆ
ಗುಂಪು ಚರ್ಚೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19-01-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ -8- 2024
BOB Recruitment 2024 ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: