ದಾವಣಗೆರೆ ಜಿಲ್ಲೆ ಮಹಾನಗರ ಪಾಲಿಕೆ (Davanagere City Corporation Recruitment 2024) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ದಾವಣಗೆರೆ ಜಿಲ್ಲೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಪೌರ ಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಅಪ್ಲೈ ಮಾಡಬಹುದು. ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರ ಮಾಹಿತಿ ಕೆಳಗೆ ನೀಡಲಾಗಿದೆ ಓದಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
Davanagere City Corporation Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ | ದಾವಣಗೆರೆ ಮಹಾನಗರ ಪಾಲಿಕೆ (ಕರ್ನಾಟಕ) |
ಹುದ್ದೆ ಹೆಸರು | ಪೌರ ಕಾರ್ಮಿಕರು |
ಹುದ್ದೆಗಳ ಸಂಖ್ಯೆ | 119 |
ಉದ್ಯೋಗ ಸ್ಥಳ | ದಾವಣಗೆರೆ (ಕರ್ನಾಟಕ) |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30-01-2024 |
ವೇತನ | 17000-28950 ರೂ. |
ಅರ್ಹತೆ:
ದಾವಣಗೆರೆ ಮಹಾನಗರ ಪಾಲಿಕೆ ನಿಯಮಗಳ ಪ್ರಕಾರ ಅನ್ವಯ.
ಅನುಭವ ಹಾಗೂ ಅರ್ಹತೆ ವಿವರಗಳು:
- ಕನ್ನಡ ಮಾತನಾಡಲು ಬರುತ್ತಿರಬೇಕು.
- ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ನೇರ ವೇತನ/ಕಲ್ಯಾಣ/ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗಿಂತ ಕಡಿಮೆಯಿಲ್ಲದೆ ನಿರಂತರವಾಗಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ವಯಸ್ಸಿನ ಮಿತಿ:
ದಾವಣಗೆರೆ ಮಹಾನಗರ ಪಾಲಿಕೆ ನಿಯಮಗಳ ಪ್ರಕಾರ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು 55 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ದಾವಣಗೆರೆ ಮಹಾನಗರ ಪಾಲಿಕೆ ನಿಯಮಗಳ ಪ್ರಕಾರ ಅನ್ವಯ ಆಗುವುದು.
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಕೆಲಸದ ಅನುಭವ ಮತ್ತು ಸಂದರ್ಶನ.
ಅರ್ಜಿ ಸಲ್ಲಿಕೆ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ ಮತ್ತು ಇತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 30-01-2024 ರಂದು ಅಥವಾ ಮೊದಲು ಅಂಚೆ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಇತರೆ ಯಾವುದೇ ಸೇವೆಗಳ ಮೂಲಕ “ದಾವಣಗೆರೆ ಮಹಾನಗರ ಪಾಲಿಕೆ ಕೇಂದ್ರ ಕಛೇರಿ, ರೈಲ್ವೇ ನಿಲ್ದಾಣದ ಎದುರು, ಪಿ.ಬಿ. ದಾವಣಗೆರೆ” ಈ ವಿಳಾಸಕ್ಕೆ ನಿಗದಿತ ಸಮಯದಲ್ಲಿ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29-12-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30-01-2024
Davanagere City Corporation Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: davanagerecity.mrc.gov.in