ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL Recruitment 2024) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅರ್ಜಿ ಅಪ್ಲೈ ಮಾಡಬಹುದು.
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (Hindustan Petroleum Corporation Limited) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಅಪ್ಲೈ ಮಾಡಿ.
HPCL Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)
ಹುದ್ದೆ ಹೆಸರು: ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ
ಉದ್ಯೋಗ ಸ್ಥಳ: ಅಖಿಲ ಭಾರತ
ವೇತನ: 25,000 ರೂ.
ಶೈಕ್ಷಣಿಕ ವಿದ್ಯಾರ್ಹತೆ:
ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್/ಮೆಕ್ಯಾನಿಕಲ್/ಕೆಮಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್/ಇನ್‌ಸ್ಟ್ರುಮೆಂಟೇಶನ್/ಕಂಪ್ಯೂಟರ್ ಸೈನ್ಸ್/ಐಟಿ/ಪೆಟ್ರೋಲಿಯಂ ಎಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಹೊಂದಿರಬೇಕು.
ವಯೋಮಿತಿ:
HPCL ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 3, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ-NC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ
PwBD ಅಭ್ಯರ್ಥಿಗಳಿಗೆ- 10 ವರ್ಷ
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಮೆರಿಟ್ ಲಿಸ್ಟ್
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 03-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-01- 2024
ಸಂದರ್ಶನದ ತಾತ್ಕಾಲಿಕ ದಿನಾಂಕ: ಜನವರಿ/ ಫೆಬ್ರವರಿ 2024
HPCL Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: hindustanpetroleum.com