ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ (Ramanagara District Court Recruitment 2024) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.
ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ (Ramanagara District Court) ಖಾಲಿ ಇರುವ ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಕುರಿತಾಗಿ ಎಲ್ಲಾ ಕುರಿತಾಗಿ ಇಲ್ಲಿದೆ ಮಾಹಿತಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
Ramanagara District Court Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ | ರಾಮನಗರ ಜಿಲ್ಲಾ ನ್ಯಾಯಾಲಯ (ಕರ್ನಾಟಕ) |
ಹುದ್ದೆಯ ಹೆಸರು | ಸ್ಟೆನೋಗ್ರಾಫರ್, ಟೈಪಿಸ್ಟ್ |
ಹುದ್ದೆಗಳು ಸಂಖ್ಯೆ | 6 |
ವಿದ್ಯಾರ್ಹತೆ | ಡಿಪ್ಲೊಮಾ, PUC |
ವೇತನ | 27,650 ರಿಂದ 52,650 ರೂ. |
ಉದ್ಯೋಗದ ಸ್ಥಳ | ರಾಮನಗರ (ಕರ್ನಾಟಕ) |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜನವರಿ, 22-2024 |
ಹುದ್ದೆಗಳ ವಿವರ:
ಸ್ಟೆನೋಗ್ರಾಫರ್- 3
ಟೈಪಿಸ್ಟ್- 2
ಟೈಪಿಸ್ಟ್-ಕಾಪಿಯಿಸ್ಟ್-1
ಶೈಕ್ಷಣಿಕ ವಿದ್ಯಾರ್ಹತೆ:
ರಾಮನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಮನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 22, 2024 ಕ್ಕೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-I ಅಭ್ಯರ್ಥಿಗಳಿಗೆ: 05 ವರ್ಷ
ಪ್ರವರ್ಗ-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
ವೇತನ:
ಸ್ಟೆನೋಗ್ರಾಫರ್: 27,650-52,650 ರೂ.
ಟೈಪಿಸ್ಟ್: 21,400-42,000 ರೂ.
ಟೈಪಿಸ್ಟ್-ಕಾಪಿಯಿಸ್ಟ್-: 21,400- 42,000 ರೂ.
ಅರ್ಜಿ ಶುಲ್ಕ:
ಪ್ರವರ್ಗ-2A/2B/3A & 3B ಅಭ್ಯರ್ಥಿಗಳಿಗೆ: 100 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ: 200 ರೂ.
SC/ST/ಪ್ರವರ್ಗ-I/PH ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಟೈಪಿಂಗ್ ಟೆಸ್ಟ್
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 22-12-2023
ಅರ್ಜಿ ಸಲ್ಲಿಸಲು ಕೊನೆಯ ದಿನ: 22-01-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23-01-2024
Ramanagara District Court Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಪಿಡಿಎಫ್: ಡೌನ್‌ಲೋಡ್
ಸ್ಟೆನೋಗ್ರಾಫರ್ ಹುದ್ದೆಗೆ ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಟೈಪಿಸ್ಟ್ ಹುದ್ದೆಗೆ ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಟೈಪಿಸ್ಟ್-ಕಾಪಿಸ್ಟ್ ಹುದ್ದೆಗೆ ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ramanagara.dcourts.gov.in