ಯಾದಗಿರಿ ಜಿಲ್ಲೆಯ ನ್ಯಾಯಾಲಯ (Yadgir District Court Recruitment 2024) ಗಳಲ್ಲಿ, ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಯಾದಗಿರಿ ಜಿಲ್ಲೆಯ ನ್ಯಾಯಾಲಯಗಳಲ್ಲಿ, ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು. ಹುದ್ದೆಗಳ ಸಂಬಂಧಿಸಿದ ಮಾಹಿತಿ, ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಿದ್ಯಾರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ ಸಂಪೂರ್ಣ ಓದಿ ಅಪ್ಲೈ ಮಾಡಿ.
Yadgir District Court Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ಯಾದಗಿರಿ ಜಿಲ್ಲಾ ನ್ಯಾಯಾಲಯ (ಕರ್ನಾಟಕ)
ಹುದ್ದೆ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಜವಾನ.
ಹುದ್ದೆಗಳ ಸಂಖ್ಯೆ: 30
ಉದ್ಯೋಗ ಸ್ಥಳ: ಯಾದಗಿರಿ (ಕರ್ನಾಟಕ)
ವೇತನ: 17000 – 52650 ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 15, 2024
Yadgir District Court Recruitment 2024ಹುದ್ದೆಗಳ ವಿವರ:
ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ
ಪ್ಯೂನ್ (ಉಳಿದ ಪೋಷಕ ವರ್ಗ) 3
ಪ್ಯೂನ್ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) 21
ಟೈಪಿಸ್ಟ್ (ಉಳಿದ ಪೋಷಕ ವರ್ಗ) 2
ಬೆರಳಚ್ಚುಗಾರ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) 3
ಸ್ಟೆನೋಗ್ರಾಫರ್ 1
ಹುದ್ದೆವಾರು ವೇತನ ಶ್ರೇಣಿ:
ಹುದ್ದೆ ಹೆಸರು ವೇತನ ಶ್ರೇಣಿ
ಪ್ಯೂನ್ (ಉಳಿದ ಪೋಷಕ ವರ್ಗ) 17000-28950 ರೂ.
ಪ್ಯೂನ್ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) 17000-28950 ರೂ.
ಟೈಪಿಸ್ಟ್ (ಉಳಿದ ಪೋಷಕ ವರ್ಗ) 21400-42000 ರೂ.
ಬೆರಳಚ್ಚುಗಾರ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) 21400-42000 ರೂ.
ಸ್ಟೆನೋಗ್ರಾಫರ್ 27650-52650 ರೂ.
Yadgir District Court Recruitment 2024 ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಬೆರಳಚ್ಚುಗಾರರು:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಮತ್ತು ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
ಜವಾನರು:
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ವಯೋಮಿತಿ ಸಡಿಲಿಕೆ:
- Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
- SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
- PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 200 ರೂ.
Cat-2A/2B/3A & 3B ಅಭ್ಯರ್ಥಿಗಳಿಗೆ: 100 ರೂ.
SC/ST/Cat-I/PH ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ :
ಶೀಘ್ರಲಿಪಿಗಾರ, ಬೆರಳಚ್ಚುಗಾರ:
ಹುದ್ದೆಗೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಬೆರಳಚ್ಚು ಯಂತ್ರ/ ಗಣಕಯಂತ್ರದಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು.
ಜವಾನ ಹುದ್ದೆಗೆ:
10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಅಧಿಸೂಚನೆ ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 16, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 15, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಫೆಬ್ರವರಿ 16, 2024
Yadgir District Court Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಸ್ಟೆನೋಗ್ರಾಫರ್ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) ಅಧಿಕೃತ ಅಧಿಸೂಚನೆ : ಡೌನ್‌ಲೋಡ್
ಪ್ಯೂನ್ (ಉಳಿದ ಪೋಷಕ ಸಿಬ್ಬಂದಿ) ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಪ್ಯೂನ್ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಟೈಪಿಸ್ಟ್ (ಉಳಿದ ಪೋಷಕ ವರ್ಗ) ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಟೈಪಿಸ್ಟ್ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: yadgir.dcourts.gov.in